show blocks helper
  • ಶಬ್ದ ಪ್ರಸಾರವಾಗಲು ಒಂದು ಮಾಧ್ಯಮದ ಅವಶ್ಯಕತೆಯಿದೆ ಶಬ್ದವು ನೀಳತರಂಗವಾಗಿ ಪ್ರಸಾರವಾಗುತ್ತದೆ ಮತ್ತು ಪ್ರಸಾರವಾಗಲು ಮಾಧ್ಯಮದ ಅವಶ್ಯಕತೆಯಿದೆ. ಶಬ್ದವು ಯಾವಾಗಲೂ ಒಂದು ಕಂಪಿಸುವ ವಸ್ತುವಿನಿಂದ ಉಂಟಾಗುತ್ತದೆ. ಶೃತಿಕವೆ, ಡೋಲು, ಘಂಟೆಗಳು, ವೀಣೆಯ ತಂತಿಗಳು ಇತ್ಯಾದಿಗಳಿಂದ ಈ ಕಂಪನಗಳು ಉಂಟಾಗುತ್ತವೆ. ಮಾನವನಲ್ಲಿ ಧ್ವನಿಯು ಧ್ವನಿತಂತುಗಳ ಕಂಪನದಿಂದ ಉಂಟಾಗುತ್ತದೆ ಮತ್ತು ಸಂಗೀತ ವಾದ್ಯಗಳಿಂದ ಶಬ್ದವು ವಾದ್ಯಗಳಲ್ಲಿ ತುಂಬಿರುವ ಗಾಳಿಯ ಕಂಪನದಿಂದ ಉಂಟಾಗುತ್ತದೆ. ಕೆಲವು ಸಂದರ್ಭಗಳಲ್ಲಿ ಶಬ್ದ ಉತ್ಪತ್ತಿ ಮಾಡುವ ವಸ್ತುವಿನ ಕಂಪನಗಳು ಎಷ್ಟು ಕಡಿಮೆ ಅಥವ ಹೆಚ್ಚಾಗಿರುತ್ತವೆಂದರೆ ಮಾನವನ ಕಿವಿಗಳು ಅದನ್ನು ಗ್ರಹಿಸಲಾರವು. ಮಾನವನ ಶ್ರವಣ ಶ್ರೇಣಿಯ ಆವೃತ್ತಿಯು 20 ಹಟ್ರ್ಜ್ ನಿಂದ 20000 ಹಟ್ರ್ಜ್ ವರೆಗೆ ವ್ಯಾಪಿಸಿದೆ. 20 ಹಟ್ರ್ಜ್‍ಗಿಂತ ಕಡಿಮೆ ಆವೃತ್ತಿಯ ಶಬ್ದವನ್ನು ಅವಧ್ವನಿ ಎಂದೂ, 20000 ಹಟ್ರ್ಜ್‍ಗಿಂತ ಹೆಚ್ಚಿನ ಆವೃತ್ತಿಯುಳ್ಳ ಶಬ್ದವನ್ನು ಶ್ರವಣಾತೀತ ಧ್ವನಿ ಎಂದು ಕರೆಯುತ್ತಾರೆ. ಘಂಟಾಪಾತ್ರೆಯ ಪ್ರಯೋಗವು ಶಬ್ದ ಪ್ರಸಾರಕ್ಕೆ ಮಾಧ್ಯಮ ಅವಶ್ಯಕ ಎಂದು ರುಜುವಾತುಪಡಿಸಲು ಮಾಡುವ ಸಾಮಾನ್ಯ ಪ್ರಯೋಗವಾಗಿದೆ.
  • ವಯಸ್ಸಾದಂತೆ ಕೀಲುಗಳಿಗೆ 'ಆಸ್ಟಿಯೋ ಆರ್ಥ್ರೈಟಿಸ್‌' ಉಂಟಾಗಿ ಬಹುಪಾಲು ಜನರಿಗೆ ತೊಂದರೆಯಾಗುತ್ತದೆ. ಆದರೆ, ಇದರಿಂದ ಎಲ್ಲರೂ ನರಳುತ್ತಾರೆಂದಲ್ಲ. ಮಾಂಸಖಂಡ ಬಿಗಿಯಾಗುತ್ತದೆಂದೂ ಅಲ್ಲ. ಕೆಲವರಿಗೆ ಅಲ್ಪಸ್ವಲ್ಪ ಅನಾನುಕೂಲವಾಗಬಹುದು ಅಥವಾ ಯಾವುದೂ ಲಕ್ಷಣಗಳೂ ಇಲ್ಲದೆಯೂ ಇರಬಹುದು. ಇಂತಹ 'ಆಸ್ಟಿಯೋ ಆರ್ಥ್ರೈಟಿಸ್‌' ಅನ್ನು 'ಸೈಲೆಂಟ್‌‌' ಮಾದರಿಯ ಕಾಯಿಲೆಯೆನ್ನಬಹುದು.

Go to Top